ನವದೆಹಲಿ : ಲೋಕಸಭೆಯಲ್ಲಿ ಇಂದು ನಡೆಯುವ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಮಾತು ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.
ವಂದನಾ ನಿರ್ಣಯದ ಮೇಲಿನ ಚರ್ಚೆ 12 ಗಂಟೆಗಳ ಕಾಲ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಗೆ 1 ಗಂಟೆ ನೀಡಲಾಗಿದೆ, ಈ ವೇಳೆ ಕಾಂಗ್ರೆಸ್ ಪರವಾಗಿ ಮೊದಲಿಗರಾಗಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಈ ವೇಳೆ ಅವರು, ಪೆಗಾಸಸ್ ಸಾಫ್ಟ್ವೇರ್ ಸ್ಪೈವೇರ್ ವಿಷಯವನ್ನು ಭಾಷಣದಲ್ಲಿ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.
ಫೆ.7ರಂದು ಲೋಕಸಭೆಯಲ್ಲಿ ಮತ್ತು ಫೆ.8ರಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಅವರು ಮಾತನಾಡುವ ಸಾಧ್ಯತೆ ಇದೆ.










