ರಾಷ್ಟ್ರಪತಿಯನ್ನು ‘ರಾಷ್ಟ್ರಪತ್ನಿ’ ಎಂದ ಅಧೀರ್ ರಂಜನ್ ಚೌಧರಿ – ಕಾಂಗ್ರೆಸ್ ಕ್ಷಮೆಯಾಚಿಸುವಂತೆ ಬಿಜೆಪಿ ಒತ್ತಾಯ…

71
firstsuddi

ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಂಬೋಧಿಸಿದ್ದರು. ಅಧೀರ್ ರಂಜನ್ ಅವರ ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಲೋಕಸಭೆಯಲ್ಲಿ ಈ ಕುರಿತು ಕಾಂಗ್ರೆಸ್ ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವೆ ಸ್ಮೃತಿ ಇರಾನಿ, ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯ ಘನತೆಯನ್ನು ಅಪಮಾನಿಸುವುದರ ಅರಿವು ಇಟ್ಟುಕೊಂಡೇ ಎ.ಆರ್.ಚೌಧರಿ ಅವರು ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಬುಡಕಟ್ಟು ವಿರೋಧಿ, ದಲಿತ ಮತ್ತು ಮಹಿಳಾ ವಿರೋಧಿಯಾಗಿದೆ ಎಂಬುದು ದೇಶಕ್ಕೆ ತಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿದ್ದು, ಕಾಂಗ್ರೆಸ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಕರೆದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ತಪ್ಪಿಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆ ಯಾಚಿಸಬೇಕು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒತ್ತಾಯಿಸಿದ್ದಾರೆ.

ನನ್ನ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನಾನು ತಪ್ಪಾಗಿ ‘ರಾಷ್ಟ್ರಪತ್ನಿ’ ಎಂದು ಹೇಳಿದ್ದೇನೆ. ಅದಕ್ಕಾಗಿ ಅವರು ನನ್ನನ್ನು ಗಲ್ಲಿಗೇರಿಸಲು ಬಯಸಿದರೆ ಗಲ್ಲಿಗೇರಿಸಬಹುದು ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಈ ಆರೋಪದ ಕುರಿತು ಲೋಕಸಭೆಯ ಹೊರಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.