ನವದೆಹಲಿ : ವಿರೋಧ ಪಕ್ಷಗಳ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ಇಂದು ನವದೆಹಲಿಯ ಸಂಸತ್ತಿನಲ್ಲಿ ನಾಮಪತ್ರ ಸಲ್ಲಿಸಿದರು.
ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಲವಾರು ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
2022ರ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಆಯ್ಕೆಯಾಗಿದ್ದಾರೆ.










