ನವದೆಹಲಿ : ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 72ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ದೆಹಲಿಯ ರಾಜ್ಘಾಟ್ನಲ್ಲಿ ಗಾಂಧೀಜಿ ಅವರ ಸಮಾಧಿಗೆ ಗಣ್ಯರು ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಭಾರತೀಯ ಸೇನಾಪಡೆ ಮುಖ್ಯಸ್ಥರಾದ ಬಿಪಿನ್ ರಾವತ್, ಭೂಸೇನಾ ಮುಖ್ಯಸ್ಥ ಜನರಲ್ ನರವಾನೆ, ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ಕರಂಬೀರ್ ಸಿಂಗ್, ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಅವರು ಭೇಟಿ ನೀಡಿ ಗಾಂಧೀಜಿಗೆ ಪುಷ್ಪ ನಮನ ಸಲ್ಲಿಸಿದರು.










