ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ – 6 ಮಂದಿ ಕಾರ್ಮಿಕರು ಸಾವು…

73
firstsuddi

ಗಾಂಧಿನಗರ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ.

ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ಏಕಾಏಕಿ ಸ್ಫೋಟಗೊಂಡಿದೆ. ರಿಯಾಕ್ಟರ್ ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಅಲ್ಲೇ ಇದ್ದ 6 ಮಂದಿ ಮೃತಪಟ್ಟಿದ್ದಾರೆ. ನಂತರ ಬೆಂಕಿಯನ್ನು ನಿಯಂತ್ರಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಮಾಹಿತಿ ನೀಡಿದ್ದಾರೆ.