ರಾಹುಲ್ ಗಾಂಧಿಗೆ ಕೊರೊನಾ ಸೋಂಕು ದೃಢ!

109
firstsuddi

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಸ್ವತಃ ರಾಹುಲ್ ಗಾಂಧಿ ಅವರೇ ಟ್ವಿಟರ್ ನಲ್ಲಿ ತಿಳಿಸಿದ್ದು, ಲಘು ಪ್ರಮಾಣದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಕೋವಿಡ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕದಲ್ಲಿದ್ದವರು ಈ ಕೂಡಲೇ ಟೆಸ್ಟ್ ಮಾಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ್ಯಾ ಲಿಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದರು.

ನಿನ್ನೆಯಷ್ಟೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.