ರಿಜ್ವಾನ್ ಅರ್ಷದ್ ಅವರ ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ರಾಜಕೀಯ ಪ್ರೇರಿತ ಐಟಿ ದಾಳಿಗಳಾಗಿರುವುದು ಖಂಡನೀಯ:ಸಿದ್ದರಾಮಯ್ಯ…

204
firstsuddi

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಕಚೇರಿ ಹಾಗೂ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಿದ ಹಿನ್ನೆಲೆ ಪ್ರತಿಕ್ರಯಿಸಿದ ಮಾಜಿ ಮುಖ್ಯಂಮತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಕಚೇರಿ ಹಾಗೂ ಸಂಬಂಧಿಕರ ಮನೆಗಳ ಮೇಲೆ ರಾಜಕೀಯ ಪ್ರೇರಿತ ಐಟಿ ದಾಳಿಗಳಾಗಿರುವುದು ಖಂಡನೀಯ. ನ್ಯಾಯಯುತವಾಗಿ ಚುನಾವಣೆ ಎದುರಿಸಲಾಗದ ಬಿಜೆಪಿ ಪಕ್ಷ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ವಿರೋಧಿಗಳ ಆತ್ಮಸ್ಥೈರ್ಯ ಕುಗ್ಗಿಸಲು ಹೊರಟಿದೆ. ಇದಕ್ಕೆ ಕಾಂಗ್ರೆಸ್ ಮಣಿಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.