ನವದೆಹಲಿ : ದಕ್ಷಿಣ ಆಫ್ರಿಕಾ ಸೇರಿದಂತೆ ನಾಲ್ಕು ದೇಶಗಳಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರಿ ತಳಿಯ ಒಮಿಕ್ರಾನ್ ಸೋಂಕು ಭಾರತದಲ್ಲೂ ತಲ್ಲಣ ಮೂಡಿಸಿದೆ. ಈ ಸಂಬಂಧ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧ ಹೇರುವಂತೆ ಮನವಿ ಮೋದಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಕಾಣಿಸಿಕೊಂಡ ದೇಶಗಳಿಂದ ವಿಮಾನ ಹಾರಾಟವನ್ನು ನಿಷೇಧಿಸಬೇಕು. ಈ ಹೊಸ ರೂಪಾಂತರವು ಭಾರತಕ್ಕೆ ಪ್ರವೇಶಿಸುವುದನ್ನು ತಡೆಯಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.
ಈಗಾಗಲೇ ಅಮೆರಿಕ ಬ್ರಿಟಿನ್ ಸೇರಿ ಹಲವು ದೇಶಗಳು ದಕ್ಷಿಣ ಆಫ್ರಿಕಾ, ಇಸ್ರೇಲ್, ಬೆಲ್ಜಿಯಂ, ಬೋಟ್ಸ್ವಾನಾ ಮತ್ತು ಹಾಂಗ್ಕಾಂಗ್ ವಿಮಾನಗಳಿಗೆ ನಿಷೇಧ ಹೇರಿವೆ.










