ರೆಮ್ ಡೆಸಿವಿರ್ ಮೇಲಿನ ಆಮದು ಸುಂಕವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ…

101
firstsuddi

ನವದೆಹಲಿ : ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಸಲಾಗುವ ಆ್ಯಂಟಿ-ವೈರಲ್ ಔಷಧವಾದ ರೆಮ್ ಡೆಸಿವಿರ್ ಮೇಲಿನ ಆಮದು ಸುಂಕವನ್ನು ಭಾರತ ಸರ್ಕಾರ ರದ್ದುಗೊಳಿಸಿದೆ.

ರೆಮ್ ಡೆಸಿವಿರ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಔಷಧಿ ತಯಾರಿಸಲು ಬಳಸುವ ಕಚ್ಚಾವಸ್ತುಗಳ ಆಮದು ಮೇಲಿನ ಸುಂಕವನ್ನು ರದ್ದುಗೊಳಿಸಲಾಗಿದೆ.

ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಔಷಧ ಕಾರ್ಯದರ್ಶಿ ಎಸ್.ಅಪರ್ಣಾ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳ ಜತೆ ಸಭೆ ನಡೆಸಿದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.