ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ನಿವಾಸದ ಬಳಿ ಪೊಲೀಸ್ ಬಿಗಿ ಭದ್ರತೆ.

38

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ಆಗಿರುವ ನಟ ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿದ ಹೈಕೋರ್ಟ್ ದರ್ಶನ್ ಅವರಿಗೆ 6 ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಅವರ ಚಲನವಲನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ನಟ ದರ್ಶನ್ ಅವರ ಆರ್‍ಆರ್ ನಗರದ ಮನೆಯ ಬಳಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು, ದರ್ಶನ್ ಅವರ ಮನೆಯ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದಾರೆ. ನಿವಾಸದ ಬಳಿ 2 ಕೆಎಸ್‍ಆರ್‍ಪಿ ತುಕಡಿ, ಸ್ಥಳೀಯ ಪೊಲೀಸರು ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಇಗ ಸದ್ಯಕ್ಕೆ ನಟ ದರ್ಶನ್ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ಅವರ ಪತ್ನಿಯ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ದರ್ಶನ್ ಮಗ ವಿನೀಶ್ ಹುಟ್ಟುಹಬ್ಬವಿದ್ದು, ಆ ಕಾರ್ಯಕ್ರಮ ಮುಗಿಸಿಕೊಂಡು ನಂತರ ದರ್ಶನ್ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.