ರೇವಣ್ಣ ಅವರೇ ನೀವು ಈಗಲೇ ರಾಜಕೀಯ ನಿವೃತ್ತಿ ಪಡೆಯಬಹುದು : ಜಗದೀಶ್ ಶೆಟ್ಟರ್…

167
Firstsuddi

ಗದಗ : ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ಮೋದಿ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗುವುದು ನಿಶ್ಚಿತ. ರೇವಣ್ಣ ಅವರೇ ನೀವು ಈಗಲೇ ರಾಜಕೀಯ ನಿವೃತ್ತಿ ಪಡೆಯಬಹುದು. ನಿವೃತ್ತಿ ಪಡೆಯುತ್ತೇನೆ ಎಂದು ಸುಳ್ಳು ಹೇಳಿಕೆಯನ್ನು ಕೊಡಬೇಡಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ. ದೇವೇಗೌಡ್ರು ಅವರೂ ಕೂಡಾ ಮೋದಿ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದರು. ಆದರೆ ಈಗಲೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ರಾಜಕೀಯ ನಿವೃತ್ತಿ ಪಡೆದಿಲ್ಲ ಎಂದು ಹೇಳಿದರು.