ಶಿವಮೊಗ್ಗ: ರೈಲಿಗೆ ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಂಸಿ ಬಳಿ ನಡೆದಿದೆ.
ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್, ಬಿಹಾರ ಮೂಲದ ಅರುಣ್ ಕುಮಾರ್ ಮೃತ ದುರ್ದೈವಿ. ಮೃತ ಅರುಣ್ ಕುಮಾರ್ ಕುಂಸಿ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ರೈಲಿನಲ್ಲಿ ಬಂದ ಅರುಣ್ ಕುಮಾರ್ ನಿನ್ನೆ ಬೆಳಗಿನ ಜಾವ ಕುಂಸಿ ಬಳಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಅರುಣ್ ಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.










