ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ವಸ್ತು ಪತ್ತೆ…

155
firstsuddi

ಬೆಂಗಳೂರು : ಅನುಮಾನಸ್ಪದ ವಸ್ತುವನ್ನು ಕಂಡು ಪ್ರಯಾಣಿಕರು ಭಯಬೀತರಾಗಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅನುಮಾನಸ್ಪದ ವಸ್ತು ಗ್ರೆನೇಡ್ ರೀತಿಯಲ್ಲಿ ಕಂಡು ಬಂದಿದ್ದು, ಅದನ್ನು ಕಂಡು ಪ್ರಯಾಣಿಕರು ಸ್ಥಳದಿಂದ ಓಡಿ ಹೋಗಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಗ್ರೆನೇಡ್ ಮಾದರಿಯ ವಸ್ತವನ್ನು ಬಾಂಬ್ ನಿಷ್ಕ್ರಿಯ ದಳದವರು ವಶಕ್ಕೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ.