ರೋಹಿಣಿ ಸಿಂಧೂರಿ, ರೂಪಾಗೆ ವರ್ಗಾವಣೆ ಶಾಕ್…

88
firstsuddi

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ನಡುವಿನ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯುಕ್ತಿಗೊಳಿಸದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಜೊತೆಗೆ ಐಎಎಸ್ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಡಿ. ರೂಪಾ ಕರಕುಶಲ ಅಭಿವೃದ್ಧಿ ನಿಗಮ ಎಂಡಿಯಾಗಿದ್ದರು ಹಾಗೂ ರೋಹಿಣಿ ಸಿಂಧೂರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆಯಾಗಿದ್ದರು.

ಎಚ್.ಬಸವರಾಜೇಂದ್ರ ಅವರನ್ನು ರೋಹಿಣಿ ಅವರ ಸ್ಥಾನಕ್ಕೆ ನಿಯೋಜಿಸಿದ್ದರೆ ಭಾರತಿ ಅವರನ್ನು ರೂಪಾ ಅವರ ಜಾಗಕ್ಕೆ ನಿಯೋಜಿಸಲಾಗಿದೆ. ಮುನೀಶ್ ಮೌದ್ಗಿಲ್ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪರ್ಸನಲ್ ಮತ್ತು ಅಡ್ಮಿನಿಸ್ಟ್ರೇಟಿವ್ ರಿಫಾರ್ಮ್ಸ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.