ನವದೆಹಲಿ : ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 35 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಣಿ ಸಿಂಧೂರಿ ಅವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ವಿಧಾನಸಭೆಯ ನಿವೃತ್ತ ಭದ್ರತಾ ಅಧಿಕ್ಷಕರಾದ ಎಂ.ಎನ್ ಪಿಳ್ಳಪ್ಪ ದೂರು ದಾಖಲಿಸಿದ್ದು, ಈ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ತಪ್ಪಿಸ್ಥರಾಗಿದ್ದು, ಈ ಹಿನ್ನೆಲೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.










