ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು ಅಮಾನತು…

67
firstsuddi

ತುಮಕೂರು: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಬ್ಬರೂ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಹೈವೆಯಲ್ಲಿ ಹೋಗುತಿದ್ದ ಕಂಟೇನರ್ ತಡೆದು ಹಣ ವಸೂಲಿ ಮಾಡುತ್ತಿದ್ದ ದೃಶ್ಯವನ್ನು ಸಾರ್ವಜನಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ಪೊಲೀಸರು ಲಂಚ ಪಡೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಚಿಕ್ಕಹನುಮಯ್ಯ ಹಣ ವಸೂಲಿ ಮಾಡಿದ ಪೊಲೀಸರು. ಸಾರ್ವಜನಿಕರು ವೀಡಿಯೋ ಸಹಿತ ರೆಡ್ ಹ್ಯಾಂಡ್ ಆಗಿ ಹಿಡಿದಾಗ ನಮ್ಮಿಂದ ತಪ್ಪಾಗಿದೆ ಎಂದು ಕ್ಷಮೆ ಕೇಳಿದ್ದಾರೆ.

ಲಂಚ ಸ್ವೀಕಾರ ಮಾಡಿದ ಇಬ್ಬರೂ ಪೊಲೀಸರನ್ನು ಅಮಾನತುಗೊಳಿಸಿ ಎಸ್‍ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.