ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು…

500
firstsuddi

ತುಮಕೂರು : ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕತ್ತಿನಾಗೇನಹಳ್ಳಿ ಬಳಿ ನಡೆದಿದೆ. ಮಂಜು(20), ಹರ್ಷ(20) ಮೃತ ದುರ್ದೈವಿಗಳು. ಐವರು ನಿನ್ನೆ ತಡರಾತ್ರಿ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನ ಹಿಂಬದಿಯಲ್ಲಿ ಕುಳಿತಿದ್ದ ಮೂವರಿಗೆ ಗಂಭೀರವಾಗಿ ಗಾಯವಾಗಿದ್ದು, ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.