ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು…

389
firstsuddi

ಚಿತ್ರದುರ್ಗ : ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟು, 8ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಪ್ಲಿಹಟ್ಟಿ ಬಳಿ ನಡೆದಿದೆ. ಪ್ರೇಮನಾಥ್(45) ಮೃತ ಚಾಲಕ ಎಂದು ಗುರುತಿಸಲಾಗಿದ್ದು, ಕಲಬುರಗಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಹೊರಟಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟು, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.