ಲಾರಿ ಹಾಗೂ ಬೈಕ್ ನಡುವೆ ಅಪಘಾತ- ದಂಪತಿ ಸಾವು…

203
firstsuddi

ದಾವಣಗೆರೆ : ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ವಡೇರಾಯನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ರಾಣೆಬೆನ್ನೂರಿನ ಹಾಲಪ್ಪ ಸಿದ್ದಪ್ಪ ಉಜ್ಜನಗೌಡ್ರು(51), ಹಾಗೂ ಸಿದ್ದಮ್ಮ ಹಾಲಪ್ಪ ಉಜ್ಜನಗೌಡ್ರು ಎಂದು ಗುರುತಿಸಲಾಗಿದೆ. ಮೃತ ದಂಪತಿ ಹರಿಹರ ನಗರದಿಂದ ತಮ್ಮ ಸ್ವ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ಹರಿಹರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.