ಪಾಟ್ನಾ : ಕೆಲವು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರಾಷ್ಟ್ರೀಯ ಜನತಾದಳದ(RJD) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಸಿಂಗಾಪುರದ ಆಸ್ಪತ್ರೆಯಲ್ಲಿ ಮೂತ್ರಪಿಂಡ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು ಟ್ವೀಟ್ ಮಾಡಿ ತಿಳಿಸಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರಿಗೆ ತಮ್ಮ ಪುತ್ರಿ ರೋಹಿಣಿ ಆಚಾರ್ಯ ಅವರುಕಿಡ್ನಿ ದಾನ ಮಾಡಿ ತಂದೆಗೆ ಹೊಸ ಬದುಕು ನೀಡಿದ್ದಾರೆ.