ಲಿಂಗಾಯತ ಸಮುದಾಯದವರು ಬಿಜೆಪಿ ಸ್ವತ್ತಲ್ಲ : ಡಿ.ಕೆ.ಶಿವಕುಮಾರ್.

134
firstsuddi

ಕಲಬುರಗಿ : ಲಿಂಗಾಯತ ಸಮುದಾಯದವರು ಬಿಜೆಪಿ ಸ್ವತ್ತಲ್ಲ, ಕಾಂಗ್ರೆಸ್ಸಿನಲ್ಲಿ ಸಹ ಹಲವು ಜನ ಪ್ರಭಾವಿ ಲಿಂಗಾಯತ ಮುಖಂಡರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿಕೆಶಿ, ಬಹಳ ಜನ ಲಿಂಗಾಯತ ಶಾಸಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಬರಲು ಸಿದ್ಧರಾಗಿದ್ದಾರೆ. ನಮ್ಮ ಬಳಿ ಸಹ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಸೇರಿದಂತೆ ಅನೇಕರು ಆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ತಮ್ಮ ಆಸ್ತಿ ಅಂತ ತಿಳಿದುಕೊಂಡಿದ್ದಾರೆ ಎಂದರು.

ಇನ್ನು ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಮ್ಯೂಜಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ ಅಂತ ಹೇಳಿಕೆ ನೀಡಿದ ಬಿಜೆಪಿ ಅಧ್ಯಕ್ಷ ಕಟೀಲ್ಗೆ ತಿರುಗೇಟು ನೀಡಿದ ಡಿಕೆಶಿ, ಸಿಎಂ ಹುದ್ದೆ ಕಾದಾಟ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿಲ್ಲ. ಅದು ಬಿಜೆಪಿಯಲ್ಲಿಯೇ ನಡೆದಿದೆ ಎಂದರು.