ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಆರೋಪಿ ಹರ್‌ಪ್ರೀತ್ ಸಿಂಗ್ ಬಂಧನ…

57
firstsuddi

ನವದೆಹಲಿ: ಪಂಜಾಬ್ ನ ಲೂಧಿಯಾನದ ಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ನನ್ನು ಬಂಧಿಸಲಾಗಿದೆ.

ಪಂಜಾಬ್ ನ ಅಮೃತಸರ ನಿವಾಸಿ ಹರ್‌ಪ್ರೀತ್ ಸಿಂಗ್ ಇಂದು ಬೆಳಗ್ಗೆ ಕೌಲಾಲಂಪುರದಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ಕೆಲವೇ ಹೊತ್ತಿನಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಲೂಧಿಯಾನ ಕೋರ್ಟ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಹರ್‌ಪ್ರೀತ್ ಸಿಂಗ್ ಆಗಿದ್ದನು. ಹರ್ ಪ್ರೀತ್ ಸಿಂಗ್ ಪಾಕಿಸ್ತಾನ ಮೂಲದ ಇಂಟರ್ ನ್ಯಾಶನಲ್ ಸಿಖ್ ಯೂತ್ ಫೆಡರೇಶನ್ (ಐಎಸ್ ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್ ಅವರ ಸಹವರ್ತಿ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಹೇಳಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಲೂಧಿಯಾನದ ಕೋರ್ಟ್ ಕಟ್ಟಡದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದಿಂದಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದರು.