ಮಂಗಳೂರು: ಯುವಕನೋರ್ವ ಲೈವ್ ವೀಡಿಯೋದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಯುವಕ. ಈತ ಅದ್ರಾಮ ಎನ್ನುವವರ ಮನೆಯಲ್ಲಿ ಕಾರು ಚಾಲಕನಾಗಿದ್ದ. ಅವರ ಮನೆಯ ಹೆಣ್ಣಿನ ಜೊತೆಗೆ ಸಂಬಂಧ ಇದೆಯೆಂದು ಹೇಳಿ ಅದ್ರಾಮ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿರೋದಾಗಿ ಆತ ಆರೋಪ ಮಾಡಿದ್ದಾನೆ.
ನನಗೆ ಯಾವುದೇ ಹೆಣ್ಣಿನ ಜೊತೆ ಸಂಬಂಧ ಇಲ್ಲ, ಆಕೆಯ ಗಂಡನೇ ಈ ಕಾರಿನಲ್ಲಿದ್ದಾನೆ ಎನ್ನುತ್ತಾ ಮೂವರನ್ನೂ ವೀಡಿಯೋದಲ್ಲಿ ತೋರಿಸಿ ಇವರೇ ನನ್ನ ಸಾವಿಗೆ ಕಾರಣ, ನಾನು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿ ವೀಡಿಯೋವನ್ನು ಕೊನೆಗೊಳಿಸಿದ್ದಾನೆ.
ಬಳಿಕ ನಾಸಿರ್ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.










