ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಎನ್​ಡಿಎಗೆ ಬಹುಮತ ಬರಲು ಸಾಧ್ಯವಿಲ್ಲ: ಸಿದ್ದರಾಮಯ್ಯ.

31
firstsuddi

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತ್ತೆ ಕೇಂದ್ರದಲ್ಲಿ ಎನ್​ಡಿಎಗೆ ಬಹುಮತ ಬರಲು ಸಾಧ್ಯವಿಲ್ಲ. ಇಂಡಿಯಾ ಒಕ್ಕೂಟಕ್ಕೆ ಬಹುಮತ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದಲ್ಲಿ ಮತ್ತೆ ಎನ್​ಡಿಎ ಅಧಿಕಾರಕ್ಕೆ ಬರುವ ವಿಚಾರದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ”ದೇಶದಲ್ಲಿ ಎನ್​ಡಿಎಗೆ ಬಹುಮತ ಬರುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಸಿಗಲಿದೆ” ಎಂದರು.

ಎನ್ಐಎ ತಂಡಕ್ಕೆ ಧನ್ಯವಾದ: ”ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿಗಳನ್ನು ಎನ್ಐಎ ಹಾಗೂ ರಾಜ್ಯ ಪೊಲೀಸರು ಕೋಲ್ಕತ್ತಾದಲ್ಲಿ ಸೆರೆ ಹಿಡಿದಿದ್ಧಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಉಳಿದ ವಿಚಾರಗಳು ತನಿಖೆಯಿಂದ ಗೊತ್ತಾಗಲಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಕ್ಕೆ ಮೋದಿ ಕೊಡುಗೆ ಏನು : ”ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಬರುತ್ತಿರುವುದು ನನಗೇನೂ ಅಭ್ಯಂತರವಿಲ್ಲ. ಆದರೆ, ರಾಜ್ಯಕ್ಕೆ ಮೋದಿ ಅವರ ಕೊಡುಗೆ ಏನು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಲಿ” ಎಂದು ಸಿಎಂ ಒತ್ತಾಯಿಸಿದರು.