ಧಾರವಾಡ : ವಕೀಲೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿದ್ದ ಆರೋಪದಡಿ ಧಾರವಾಡ ಗ್ರಾಮೀಣ ಸಿಪಿಐ ಮಂಜುನಾಥ ಕುಸಗಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಹಿಳಾ ವಕೀಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಗೆ ಹೋಗಿದ್ದರು. ಈ ವೇಳೆ ವಕೀಲೆ ಜೊತೆ ಸಿಪಿಐ ಕುಸುಗಲ್ ಅನುಚಿತವಾಗಿ ವರ್ತಿಸಿದ್ದರು. ಈ ಸಂಬಂಧ ವಕೀಲೆ ದೂರು ಕೊಡಲು ಠಾಣೆಗೆ ಹೋದಾಗ ದೂರು ಪಡೆಯುವುದಕ್ಕೂ ಪೊಲೀಸರು ಹಿಂದೇಟು ಹಾಕಿದ್ದರು.
ಪೊಲೀಸರ ವರ್ತನೆ ಖಂಡಿಸಿ ಪ್ರತಿಭಟಿಸಿದ್ದ ಧಾರವಾಡ ವಕೀಲರು, ಎಸ್ಪಿ ಲೋಕೇಶ್ ಜಗಲಾಸರ್ ಅವರಿಗೆ ಮನವಿ ಕೊಟ್ಟು ಕ್ರಮ ಕೈಗೊಳ್ಳಲು ಹೇಳಿದ್ದರು. ಇಲ್ಲದೇ ಉಗ್ರ ಪ್ರತಿಭಟನೆ ಮಾಡೋ ಎಚ್ಚರಿಕೆ ನೀಡಿದ್ದ ವಕೀಲರು 3 ಗಂಟೆ ಧಾರವಾಡ ಜುಬ್ಲಿ ವೃತ್ತದಲ್ಲಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಈಗ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.










