ಬೆಂಗಳೂರು : ಇಂದು ವರನಟ ಡಾ.ರಾಜ್ ಕುಮಾರ್ ಅವರ 16ನೇ ವರ್ಷದ ಪುಣ್ಯಸ್ಮರಣೆ. ಈ ಹಿನ್ನಲೆಯಲ್ಲಿ ರಾಜ್ ಕುಟುಂಬಸ್ಥರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿದ್ದಾರೆ.
ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್-ದಂಪತಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ಹೆಣ್ಣು ಮಕ್ಕಳಾದ ಲಕ್ಷ್ಮೀ ಹಾಗು ಪೂರ್ಣಿಮಾ ಸೇರಿದಂತೆ ಇಡೀ ಕುಟುಂಬ ಬೆಳಗ್ಗೆ ಕಂಠೀರವ ಸ್ಟುಡಿಯೋ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು. ಇದರ ಜೊತೆಗೆ ಪಾರ್ವತಮ್ಮ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸಮಾಧಿಗೂ ಕುಟುಂಬಸ್ಥರು ಪೂಜೆ ಸಲ್ಲಿಸಿದರು. ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.










