ಹುಬ್ಬಳ್ಳಿ : ಪ್ರೇಮಿಯೊಬ್ಬ ಪ್ರೀತಿಸುವುದಾಗಿ ನಂಬಿಸಿ ಯುವತಿಯ ನಗ್ನ ಫೋಟೋವೊಂದನ್ನು ಎಡಿಟ್ ಮಾಡಿ ವಾಟ್ಸ್ಆ್ಯಪ್ ಸ್ಟೇಟಸ್‌ಗೆ ಹಾಕುವ ಮೂಲಕ ವಿಕೃತಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದ್ದು, ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಎಂಬಾತನ ವಿರುದ್ಧ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಭಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು, ಅದೇ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಜೊತೆ ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸ್ಆ್ಯಪ್ ನಂಬರ್ ಪಡೆದಿದ್ದ ಶುಭಂ ಯುವತಿ ಜೊತೆ ಚಾಟಿಂಗ್ ಮೂಲಕ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿಯ ಜೊತೆ ನಗ್ನ ವಿಡಿಯೋ ಕಾಲ್ ಮಾಡಿದ್ದಲ್ಲದೇ ಆ ಕಾಲ್ ನ ರೆಕಾರ್ಡ್ ಮಾಡಿಕೊಂಡಿದ್ದ. ನ. 11ರಂದು ಆಕೆಯ ನಗ್ನ ಫೋಟೋವನ್ನು ಎಡಿಟ್ ಮಾಡಿ ಸ್ಟೇಟಸ್‌ಗೆ ಹಾಕಿದ್ದ. ಈ ಬಗ್ಗೆ ಯುವತಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.










