ವಾಣಿಜ್ಯ ಬಳಕೆಯ ಸಿಲಿಂಡರ್ ದರ 91.50 ರೂ. ಇಳಿಕೆ…

50
firstsuddi

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿ ಇಳಿಕೆಯಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಗಳ ಪ್ರಕಾರ 19 ಕೆಜಿ ವಾಣಿಜ್ಯ ಸಿಲಿಂಡರ್ ದರದಲ್ಲಿ 91.5 ರೂಪಾಯಿ ಕಡಿಮೆ ಆಗಿದೆ. ಈ ಹಿಂದೆ 1,976 ರೂ. ಇದ್ದ ಸಿಲಿಂಡರ್ ಬೆಲೆ ಈಗ 1,885 ಕ್ಕೆ ಲಭ್ಯವಿದೆ. ತೈಲ ಕಂಪನಿಗಳು ಪ್ರತಿ ತಿಂಗಳ 1ನೇ ತಾರೀಖಿನಂದು ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಿಸುತ್ತವೆ. 

ದೆಹಲಿಯಲ್ಲಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 1,976.50 ರೂ.ನಿಂದ 1,885 ರೂ.ಗೆ ಇಳಿಕೆಯಾಗಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,095 ರೂ.ನಿಂದ 1,995 ರೂ.ಗೆ ಇಳಿಕೆಯಾಗಿದೆ. ಮುಂಬೈನಲ್ಲಿ 1,936 ರೂ. ಬದಲಿಗೆ 1,844 ರೂ., ಮತ್ತು ಚೆನ್ನೈನಲ್ಲಿ 2,141 ರೂ. ಬದಲಿಗೆ 2,045 ರೂ., ಇದೆ. ಬೆಂಗಳೂರಿನಲ್ಲಿ ಪ್ರಸ್ತುತ 1,685 ರೂ.ಗೆ ಸಿಲಿಂಡರ್ ಮಾರಾಟವಾಗುತ್ತಿದೆ. ಆದರೆ ಗೃಹ ಬಳಕೆಯ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.