ವಾಹನ ಸವಾರರಿಗೆ ಮತ್ತೆ ಶಾಕ್ – ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ…

74
firstsuddi

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ವಾಹನ ಸವಾರರಿಗೆ ಮತ್ತೆ ಶಾಕ್ ನೀಡಿದೆ. ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಲೀಟರ್ ಮೇಲೆ ತಲಾ 35 ಪೈಸೆ ಏರಿಕೆ ಮಾಡಿದ್ದು, ಇಂದಿನ ದರ ಹೀಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದ ಬಳಿಕ ಲೀಟರ್ ಪೆಟ್ರೋಲ್ ದರ 107.24 ರೂಪಾಯಿ ಹಾಗೂ 35 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 95.98 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 113.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 103.97 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಗೆ 104.19 ರೂಪಾಯಿ ಹಾಗೂ ಲೀಟರ್ ಡೀಸೆಲ್ ಗೆ 100.22 ರೂಪಾಯಿ ನಿಗದಿಯಾಗಿದೆ. ಹೈದರಾಬಾದ್ ನಲ್ಲಿ ಲೀಟರ್ ಪೆಟ್ರೋಲ್ ದರ 111.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.66 ರೂಪಾಯಿ ಇದೆ

ಇತ್ತ ಬೆಂಗಳೂರಿನಲ್ಲಿ ಪೆಟ್ರೋಲ್ ದರ 110.98 ರೂಪಾಯಿ ಇದ್ದರೆ, ಡೀಸೆಲ್ ದರ 101.86 ರೂಪಾಯಿ ಇದೆ.