ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿ ಸಾವು…

34
firstsuddi

ಬೆಂಗಳೂರು: ಅನುಮಾನಸ್ಪದವಾಗಿ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

ಅಪರಿಚಿತ ವ್ಯಕ್ತಿ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಪೊಲೀಸರು ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇದೀಗ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಹೈಗ್ರೌಂಡ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಲಿಸುತ್ತಿದ್ದ ರೈಲಿನಿಂದ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾನಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.