ವಿಚ್ಛೇದನ ಕೇಳಿದ್ದಕ್ಕೆ ಪತ್ನಿ ಮುಖಕ್ಕೆ ಆ್ಯಸಿಡ್ ಎರಚಿದ ಪತಿ.

38

ಮುಂಬೈ: ತನ್ನ ಪತಿಗೆ ಬೇರೊಂದು ಮಹಿಳೆ ಜತೆಗೆ ಅಕ್ರಮ ಸಂಬಂಧವಿರುವ ಕುರಿತು ತಿಳಿದು ಆಘಾತಕ್ಕೊಳಗಾಗಿ ವಿಚ್ಛೇದನ ಕೇಳಿದ್ದಕ್ಕೆ ವ್ಯಕ್ತಿ ಆಕೆಗೆ ಆ್ಯಸಿಡ್ ಎರಚಿರುವ ಘಟನೆ ಮುಂಬೈನಲ್ಲಿ ನಡೆದಿದೆ. 27 ವರ್ಷದ ಮಹಿಳೆ ಮಲಾಡ್‍ನಲ್ಲಿರುವ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಬುಧವಾರ ಬೆಳಗ್ಗೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಆಕೆಗೆ ಸುಟ್ಟಗಾಯಗಳು ಮತ್ತು ಮುಖದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2019 ರಲ್ಲಿ ಪ್ರೇಮವಿವಾಹ ಮಾಡಿಕೊಂಡಿದ್ದ ಮಹಿಳೆ, ಗಂಡನ ಅನೈತಿಕ ಸಂಬಂಧದ ವಿಚಾರ ತಿಳಿದು ಕಳೆದ ಮೂರು ತಿಂಗಳಿಂದ ತಾಯಿಯೊಂದಿಗೆ ವಾಸವಾಗಿದ್ದಳು. ಆತ ನಿರುದ್ಯೋಗಿಯಾಗಿದ್ದು ಜತೆಗೆ ಮಾದಕವ್ಯಸನಿಯೂ ಆಗಿದ್ದಾನೆ. ಪೊಲೀಸರು ಆಕೆಯ ಪತಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 124 (2) ಹಾನಿ ಮಾಡುವ ಉದ್ದೇಶದಿಂದ ವ್ಯಕ್ತಿಯ ಮೇಲೆ ಎರಚುವುದು, 311 (ಗಾಯ ಅಥವಾ ಕೊಲೆ ಪ್ರಯತ್ನ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದು ಘಟನೆ ಆ್ಯಸಿಡ್ ಎರಚಿ ಪರಾರಿಯಾದ ಆರೋಪಿಗಾಗಿ ಪೊಲೀಸರ ಹುಡುಕಾಟ ಖಾಸಗಿ ಕಂಪನಿಯ ನೌಕರನ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿರುವ ಆರೋಪಿಗಾಗಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆ್ಯಸಿಡ್ ದಾಳಿಯಿಂದ ಗಾಯಗೊಂಡಿರುವ ಮೂಲತ ಕಲ್ಬುರ್ಗಿಯ ನಾಗೇಶ್ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಿಂದ ಹುಡುಗಿ ವಿಚಾರದಲ್ಲಿ ಆತನ ಸ್ನೇಹಿತನೇ ನಾಗೇಶ್ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಹಾಗಾಗಿ ಪೊಲೀಸರು ಆತನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಕೃತ್ಯ ನಡೆದ ಸ್ಥಳದಲ್ಲಿ ದೊರೆತಿರುವಂತಹ ಆ್ಯಸಿಡ್ ಬಾಟಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆಗಾಗಿ ಅದನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ.