ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ – ಆತಂಕದಲ್ಲಿ ಜನತೆ…

49
firstsuddi

ವಿಜಯಪುರ : ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಈ ನಡುವೆ ಕಳೆದ ರಾತ್ರಿ 11.42ಕ್ಕೆ ಹಾಗೂ ಇಂದು ಬೆಳಗ್ಗೆ 6.19ಕ್ಕೆ ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವ ಆಗಿದೆ. ರಾತ್ರಿ ಹಾಗೂ ಬೆಳ್ಳಂಬೆಳಗ್ಗೆ ಭೂಮಿ ಕಂಪನದಿಂದ ಜನತೆ ಬೆಚ್ಚಿಬಿದ್ದಿದ್ದಾರೆ.

ನಗರದ ರೈಲ್ವೆ ಸ್ಟೇಷನ್ ಏರಿಯಾ, ರಂಭಾಪುರ ಬಡಾವಣೆ, ಬಸವೇಶ್ವರ ನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ಭೂ ಕಂಪನದ ಅನುಭವವಾಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಪದೇ ಪದೇ ಈ ರೀತಿ ಭೂಮಿ ಕಂಪಿಸುತ್ತಿರುವುದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ.

ಜಿಲ್ಲೆಯಲ್ಲಿ ಪದೇ ಪದೇ ಭೂಕಂಪನದ ಅನುಭವವಾಗುತ್ತಿದ್ದರು ಸಹ ತಜ್ಞರು ಮಾತ್ರ ಇದು ಯಾವುದೇ ಜೀವ ಹಾನಿಯಾಗುವ ಮಟ್ಟಕ್ಕೆ ಇಲ್ಲ. ಅಂರ್ತಜಲ ಮಟ್ಟ ಹೆಚ್ಚಾಗಿರುವ ಕಾರಣ ಸ್ವಲ್ಪ ಪ್ರಮಾಣದಲ್ಲಿ ಈ ರೀತಿ ಭೂಮಿ ಕಂಪಿಸುವುದು ಸಹಜ ಎನ್ನುತ್ತಾರೆ.