ವಿಜಯಪುರ : ಮತ್ತೆ ಕಂಪಿಸಿದ ಭೂಮಿ – ಭೀತಿಯಲ್ಲಿ ಜನತೆ…

73
firstsuddi

ವಿಜಯಪುರ : ಜಿಲ್ಲೆಯಲ್ಲಿ ಇಂದು ಮತ್ತೆ ಭೂಕಂಪನದ ಅನುಭವವಾಗಿದೆ.

ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಬೆಳಿಗ್ಗೆ 10:30 ರ ಸುಮಾರಿಗೆ ಭೂಕಂಪನದ ಉಂಟಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

ಅಲ್ಲದೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವ ಆಗುತ್ತಿರುವ ಕಾರಣ ಜನರು ಆತಂಕದಲ್ಲಿ ವಾಸ ಮಾಡುವಂತಾಗಿದೆ. ಇಂದು ಜಿಲ್ಲೆಯಲ್ಲಿ 3.6 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದ್ದು, ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಮಸೂತಿ ಗ್ರಾಮಕ್ಕೆ ಇಂದು ನ್ಯಾಶನಲ್ ಜಿಯೋಫಿಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ವಿಜ್ಞಾನಿಗಳ ತಂಡ ಭೇಟಿ ನೀಡಲಿದೆ.