ಚಿಕ್ಕಮಗಳೂರು: ಯುವಜನತೆ ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಜೊತೆಗೆ ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಬದುಕಿನಲ್ಲಿ ಮೇಲೆ ಬರಬೇಕು ಎಂದು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್ ಸಲಹೆ ಮಾಡಿದರು. ನಗರದ ಮಲೆನಾಡು ವಿದ್ಯಾಸಂಸ್ಥೆಯ ಎಂ.ಎಸ್.ಪದ್ಮಾವತಮ್ಮ ಎಂ.ಕೆ.ಸಾಂಬಶಿವ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೆಲವು ವರ್ಷಗಳ ಹಿಂದೆ ಬಡವರಿಗೆ ಶಿಕ್ಷಣ ಸೇರಿದಂತೆ ಎಲ್ಲವೂ ಮರೀಚಿಕೆಯಾಗಿತ್ತು. ಅವರು ಬದುಕಿನಲ್ಲಿ ಮುಂದೆ ಬರಲು ಇನ್ನೊಬ್ಬರ ಸಹಾಯ ಹಸ್ತ. ಸಹಕಾರ ಅತ್ಯಗತ್ಯವಾಗಿತ್ತು ಎಂದರು. ಇತ್ತೀಚಿನ ವರ್ಷಗಳಲ್ಲಿ ಪರಿಸ್ಥಿತಿ ಬಹಳಷ್ಟು ಬದಲಾಗಿದೆ. ಸರ್ಕಾರಗಳು ಶಿಕ್ಷಣ. ಉದ್ಯೋಗ. ಸ್ವಉದ್ಯೋಗ ಸೇರಿದಂತೆ ಬದುಕಿನಲ್ಲಿ ಮುಂದೆ ಬರಲು ಎಲ್ಲ ರೀತಿಯ ಸಹಕಾರ. ವ್ಯವಸ್ಥೆ ಮತ್ತು ಅವಕಾಶವನ್ನು ಕಲ್ಪಿಸುತ್ತಿವೆ ಎಂದು ಹೇಳಿದರು. ಸರ್ಕಾರದ ಸೌಲಭ್ಯ ಸಹಕಾರ ಮತ್ತು ಅವಕಾಶಗಳನ್ನು ಯುವ ಪೀಳಿಗೆ ಸದುಪಯೋಗಪಡಿಸಿಕೊಂಡು ಸಮರ್ಪಕವಾಗಿ ಬಳಸಿಕೊಂಡರೆ ಬದುಕಿನಲ್ಲಿ ಉನ್ನತಿ ಸಾಧಿಸಬಹುದು ಎಂದು ಕಿವಿಮಾತು ಹೇಳಿದರು. ವಿದ್ಯಾವಂತ ಯುವಜನತೆ ಬರೀ ಉದ್ಯೋಗಕ್ಕೇ ಜೋತು ಬೀಳಬಾರದು. ಸ್ವಂತ ಉದ್ಯೋಗ ಮಾಡುವ ಮೂಲಕ ರಾಷ್ಟ್ರದ ಪ್ರಗತಿಗೆ ಸಹಕಾರ ನೀಡಬೇಕು ಎಂದು ಹೇಳಿದರು. ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯ ಕುಮಾರ್ ಮಾತನಾಡಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಘಗಳು ಸಹಕಾರಿ ಎಂದರು ವಿದ್ಯಾರ್ಥಿಗಳು ತಮ್ಮ ಸರ್ವಾಂಗೀಣ ಬೆಳವಣಿಗೆಗಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಸಲಹೆ ನೀಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲೆ ಹಸೀನಾ ಬಾನು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ವಿವಿಧ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡುವುದರ ಜೊತೆಗೆ ಪ್ರೋತ್ಸಾಹ ಧನ ನೀಡಲಾಯಿತು. ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು. ಮಲೆನಾಡು ವಿದ್ಯಾಸಂಸ್ಥೆಯ ಪದನಿಮಿತ್ತ ಸದಸ್ಯ ಎಂ. ಎಸ್. ಮಂಜುನಾಥ್. ಶೈಕ್ಷಣಿಕ ಸಲಹೆಗಾರ ಕೆ.ಎನ್. ಮಂಜುನಾಥ ಭಟ್. ಕಚೇರಿ ವ್ಯವಸ್ಥಾಪಕಿ ಶ್ರೀಲಕ್ಷ್ಮಿ. ಸಹ ಪ್ರಾಧ್ಯಾಪಕ ಎನ್. ಕೆಂಚಯ್ಯ. ಕಲಾ ವಿಭಾಗದ ಮುಖ್ಯಸ್ಥ ಬಿ.ಆರ್. ವೀರಣ್ಣಗೌಡ. ವಿಜ್ಞಾನ ವಿಭಾಗದ ಮುಖ್ಯಸ್ಥ ಕೆ. ಡಿ. ಸುದೀಪ್. ಸಹ ಪ್ರಾಧ್ಯಾಪಕ ಎನ್. ಸುಮಂತ್ ಕುಮಾರ್. ಪದವಿ ವಿದ್ಯಾರ್ಥಿಗಳಾದ ವಿಷ್ಣು. ಖುಷಿ ಉಪಸ್ಥಿತರಿದ್ದರು.
Home ಸ್ಥಳಿಯ ಸುದ್ದಿ ವಿದ್ಯಾರ್ಥಿಗಳು ತಮ್ಮ ಸರ್ವಾಂಗೀಣ ಬೆಳವಣಿಗೆಗಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು: ಡಾ.ಡಿ.ಎಲ್.ವಿಜಯ ಕುಮಾರ್