ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ – ಕ್ಯಾಬ್ ಚಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು…

101
firstsuddi

ಚಿಕ್ಕಮಗಳೂರು : ಶಾಲಾ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಕ್ಯಾಬ್ ಚಾಲಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಿದ್ದರಹಳ್ಳಿಯಲ್ಲಿ ನಡೆದಿದೆ.

ಶಿಕ್ಷಕಿಯರನ್ನು ಶಾಲೆಗೆ ಬಿಡುವ ಮತ್ತು ಕರೆದುಕೊಂಡು ಬರುವ ಕೆಲಸವನ್ನು ಕ್ಯಾಬ್ ಚಾಲಕ ರಾಜಪ್ಪ ಮಾಡುತ್ತಿದ್ದ. ಅಲ್ಲದೇ ಶಿಕ್ಷಕಿಯರನ್ನು ಶಾಲೆಗೆ ಬಿಟ್ಟ ನಂತರ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದನು. ಈ ವೇಳೆ ರಾಜಪ್ಪ ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆರೋಪಿ ಚಾಲಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಸದ್ಯ ಚಾಲಕನ ವಿರುದ್ಧ ಸಖರಾಯಪಟ್ಟಣದಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ.