ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಾಧ್ಯಾಪಕ…

77
firstsuddi

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕನೋರ್ವ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದ್ದು, ಪತ್ನಿಯ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ರಾಜ್ಯಶಾಸ್ತ್ರದ ಪ್ರಾಧ್ಯಾಪಕ ಪ್ರೋ.ರಾಮಚಂದ್ರ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದರು. ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ ರಾಮಚಂದ್ರ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಸಂತ್ರಸ್ತೆ ಕೂಗಾಟ ಚೀರಾಟ ನಡೆಸಿದ್ದಾಳೆ. ಇದೇ ವೇಳೆ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಮನೆಗೆ ಬಂದಿದ್ದಾರೆ. ಈ ವೇಳೆ ಸಂತ್ರಸ್ತೆ ನನ್ನ ಮೇಲೆ ಆತ್ಯಾಚಾರವಾಗಿದೆ. ನನಗೆ ನ್ಯಾಯ ಕೊಡಿಸಿ ಎಂದು ಕೇಳಿಕೊಂಡಿದ್ದಾಳೆ. ಕೂಡಲೇ ಪತ್ನಿ ಮತ್ತು ಸಂತ್ರಸ್ತೆಯನ್ನು ಠಾಣೆಗೆ ಕರೆದುಕೊಂಡು ಬಂದು ದೂರು ದಾಖಲಿಸಿದ್ದಾರೆ. ರಾಮಚಂದ್ರ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ.

ಇದೀಗ ಪೊಲೀಸರು ಆರೋಪಿ ರಾಮಚಂದ್ರ ವಿಚಾರಣೆ ನಡೆಸುತ್ತಿದ್ದಾರೆ.