ವಿದ್ಯಾರ್ಥಿನಿ ಮೇಲೆ ಹರಿದ ಬಸ್ – ವಿದ್ಯಾರ್ಥಿಗಳಿಂದ ಪ್ರತಿಭಟನೆ…

61
firstsuddi

ಬೆಂಗಳೂರು : ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ನಡೆದಿದ್ದು, ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ.

ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದ ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಎಂಬಾಕೆ ಬಿಎಂಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಆಕೆಯ ಮೇಲೆ ಹರಿದು ಹೋಗಿದೆ. ಗಂಭೀರವಾಗಿ ಗಾಯಗೊಂಡ ಶಿಲ್ಪಾಳನ್ನು ನಾಗರಬಾವಿ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.

ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.