ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ ಆಸ್ಪತ್ರೆಗೆ ದಾಖಲು…

67
firstsuddi

ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ್ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆ, ತೀವ್ರ ಕತ್ತು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದು ಬಂದಿದೆ.

ಇನ್ನೆರಡು ಮೂರು ದಿನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು, ಅಗತ್ಯವಿದ್ದರೆ ಬೆಂಗಳೂರಿನಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಕರೆ ಮಾಡಿ ಮಾಮನಿ ಜೊತೆ ಮಾತುಕತೆ ನಡೆಸಿ ಯೋಗಕ್ಷೇಮ ವಿಚಾರಿಸಿದ್ದಾರೆ.