ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ…

64
firstsuddi

ಬೆಂಗಳೂರು : ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು, ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ.

ನವೆಂಬರ್ 16 ರಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನ.23 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ 10 ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

25 ಪರಿಷತ್ ಸದಸ್ಯರ ಅಧಿಕಾರದ ಅವಧಿ ಜನವರಿ 5ಕ್ಕೆ ಮುಕ್ತಾಯಗೊಳ್ಳಲಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ತುಮಕೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು ಮತ್ತು ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರಗಳಿಂದ ಚುನಾವಣೆ ನಡೆಯಲಿದೆ.