ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ ಸಲ್ಲಿಕೆ…

60
firstsuddi

ಬೆಳಗಾವಿ : ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರ ನೇತೃತ್ವದಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದು, ನಾಳೆ ಚುನಾವಣೆ ನಡೆಯಲಿದೆ.

ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ ವೇಳೆಯೇ ಬಿಜೆಪಿ ನಾಯಕರು ಪರಿಷತ್ ಸಭಾಪತಿ ಮಾಡುವ ಭರವಸೆಯನ್ನು ನೀಡಿದ್ದರು. ಕೊಟ್ಟ ಮಾತಿನಂತೆ ಸಭಾಪತಿ ಸ್ಥಾನ ನೀಡಿ ಬಿಜೆಪಿ ಮಾತು ಉಳಿಸಿಕೊಂಡಿದೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಬಸವರಾಜ್ ಹೊರಟ್ಟಿ, ಇದು ನನ್ನ ಜೀವನದಲ್ಲಿ ಅವಿಸ್ಮರಣೀಯ ದಿನ. ಸಿಎಂ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು, ಪಕ್ಷದ ಮುಖ್ಯಸ್ಥರು ಬಂದಿದ್ದು ಖುಷಿಯಾಯ್ತು. ಪಕ್ಷ, ಪಕ್ಷದ ನಾಯಕರು ಪ್ರೀತಿ ವಿಶ್ವಾಸ ಇಟ್ಟು ಸ್ಥಾನ ಕೊಟ್ಟಿದ್ದಾರೆ. ನನಗೆ ಕೊಟ್ಟ ಜವಾಬ್ದಾರಿ, ನಂಬಿಕೆ, ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.