ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು…

96
firstsuddi

ಧಾರವಾಡ : ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಈಗಾಗಲೇ ಸುಪ್ರೀಂಕೋರ್ಟ್​​ ನಿಂದ ಜಾಮೀನು ಪಡೆದಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಈಗ ಸಾಕ್ಷಿ ನಾಶ ಪ್ರಕರಣದಲ್ಲೂ ಇಂದು ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಜಾಮೀನು ಪಡೆದಿರುವ ವಿನಯ್ ಕುಲಕರ್ಣಿ, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ. ಆದರೆ, ಸುಪ್ರೀಂಕೋರ್ಟ್ ಕೊಲೆ ಆರೋಪ ಪ್ರಕರಣದಲ್ಲಿ ಜಾಮೀನು ನೀಡುವ ವೇಳೆ ಧಾರವಾಡಕ್ಕೆ ಭೇಟಿ ನೀಡುವಂತಿಲ್ಲ ಎಂದು ಷರತ್ತು ವಿಧಿಸಿದೆ. ಹೀಗಾಗಿ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕರೂ ಧಾರವಾಡ ಪ್ರವೇಶಿಸುವಂತಿಲ್ಲ.