ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ…

121
firstsuddi

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ ವಶದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಇಂದು ಬೆಳಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಬಳಿಕ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಅವರನ್ನು ನ್ಯಾಯಾಲಕ್ಕೆ ಕರೆದುಕೊಂಡು ಹೋಗಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಹೆಚ್. ಪಂಚಾಕ್ಷರಿ ನೇತೃತ್ವದ ಪೀಠ ವಿನಯ್ ಕುಲಕರ್ಣಿ ಅವರಿಗೆ ನಾಳೆ ಸಂಜೆವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.