ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ – ಪ್ರಯಾಣಿಕ ಅರೆಸ್ಟ್…

22
firstsuddi

ನವದೆಹಲಿ : ದುಬೈನಿಂದ ಜೈಪುರಕ್ಕೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನ ಅಪಹರಣವಾಗಿರುವ ಬಗ್ಗೆ ಸುಳ್ಳು ಟ್ವೀಟ್ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ರಾಜಸ್ಥಾನದ ನಾಗೌರ್ ನಿವಾಸಿ ಮೋತಿ ಸಿಂಗ್ ರಾಥೋಡ್ ಅವರು ದುಬೈ-ಜೈಪುರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ವಿಮಾನವು ಇಂದಿರಾಗಾಂಧಿ ಏರ್​ಪೋರ್ಟ್​ಗೆ ಬೆಳಗ್ಗೆ 9.45ಕ್ಕೆ ತಲುಪಿತ್ತು. ಈ ಮಧ್ಯೆ ರಾಥೋಡ್ ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿದ್ದರು. ಈ ಸುದ್ದಿ ತಿಳಿದ ತಕ್ಷಣ ಪೊಲೀಸರು ಕಾರ್ಯಾಚರಣೆಗೆ ಇಳಿದರು. ಆದರೆ ಅಪಹರಣದ ಸುದ್ದಿ ಸುಳ್ಳು ಎಂದು ತಿಳಿದುಬಂದಿದೆ.

ಬಳಿಕ ವಿಮಾನವನ್ನು ಅಗತ್ಯ ತಪಾಸಣೆ ನಡೆಸಿ, ಆರೋಪಿಯನ್ನು ಬಂಧಿಸಲಾಯಿತು. ನಂತರ ಮಧ್ಯಾಹ್ನ 1.40ಕ್ಕೆ ವಿಮಾನ ಟೇಕ್‍ಆಫ್ ಮಾಡಲು ಅನುಮತಿ ನೀಡಲಾಯಿತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಂದು ತಿಳಿಸಿದ್ದಾರೆ.