ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಎಫ್‍ಐಆರ್ ದಾಖಲು…

113
firstsuddi

ಮಡಿಕೇರಿ : ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಡವರು ದನದ ಮಾಂಸ ತಿನ್ನುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ಪಶ್ಚಿಮ ಘಟ್ಟದ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ ಅವರು ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದು, ದೂರನ್ನು ಸ್ವೀಕರಿಸಿದ ಪೊಲೀಸರು ಐಪಿಸಿ ಸೆಕ್ಷನ್ 153ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರವಿ ಕುಶಾಲಪ್ಪ ಅವರು ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಕೋಮುದ್ವೇಷದ ಬೆಂಕಿ ಹಚ್ಚಿದವರು ನಾವು ಇಷ್ಟಕ್ಕೆ ಸುಮ್ಮನೆ ಬಿಡುವುದಿಲ್ಲ. ಯಾರನ್ನೋ ಮೆಚ್ಚಿಸಲು ಹೋಗಿ ಕೊಡವರನ್ನು ಹೀಯಾಳಿಸಬಾರದಿತ್ತು ಎಂದು ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ಹೊರಹಾಕಿದರು.