ವಿವಾದಾತ್ಮಕ ಟ್ವೀಟ್ ಮಾಡಿ ಟೀಕೆಗೆ ಗುರಿಯಾದ ರಿಚಾ ಚಡ್ಡಾ.

17
firstsuddi

ಬಾಲಿವುಡ್ ನಟಿ ರಿಚಾ ಚಡ್ಡಾ ವಿವಾದಾತ್ಮಕ ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. ದೇಶದ ಸೈನಿಕರಿಗೆ ಅಗೌರವ ತೋರಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯಲು ಭಾರತೀಯ ಸೇನೆ ಸಿದ್ಧವಾಗಿದೆ ಎಂದು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಟ್ಯಾಗ್ ಮಾಡಿದ್ದ ನಟಿ ಗಾಲ್ವಾನ್ ಹಾಯ್ ಹೇಳುತ್ತಿದೆ ಎಂದು ಬರೆದುಕೊಂಡಿದ್ದರು.

ಭಾರತ ಮತ್ತು ಚೀನಾ ನಡುವಿನ 2020ರ ಗಾಲ್ವಾನ್ ಘರ್ಷಣೆಯ ಬಗ್ಗೆ ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಿದ್ದಕ್ಕಾಗಿ ಮತ್ತು ಸೈನಿಕರ ತ್ಯಾಗವನ್ನು ಲೇವಡಿ ಮಾಡಿದ್ದಕ್ಕಾಗಿ ನೆಟ್ಟಿಗರು ರಿಚಾ ಚಡ್ಡಾ ವಿರುದ್ಧ ಹರಿಹಾಯ್ದಿದ್ದಾರೆ. ನಟಿಯ ವಿರುದ್ಧ ಕೇಸ್ ದಾಖಲಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.