ವಿವಾದಿತ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಸಂಕಷ್ಟ – ಮುಂಬ್ರಾ ಪೊಲೀಸರಿಂದ ಸಮನ್ಸ್.

61
firstsuddi

ಮುಂಬೈ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಇದೀಗ ಸಂಕಷ್ಟ ಎದುರಾಗಿದೆ. ನೂಪುರ್ ಶರ್ಮಾ ವಿರುದ್ದ ಮಹಾರಾಷ್ಟ್ರದ ಮುಂಬ್ರಾ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಶರ್ಮಾ ವಿರುದ್ಧ ಎಫ್ ಐಆರ್ ದಾಖಲಿಸಿದ ನಂತರ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ಪೊಲೀಸರು ಶರ್ಮಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಜೂನ್ 22 ರಂದು ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ. ಪೊಲೀಸರು ಶರ್ಮಾ ಅವರಿಗೆ ಇಮೇಲ್ ಮತ್ತು ಸ್ಪೀಡ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಿದ್ದಾರೆ. ಇದರ ಜೊತೆಗೆ ಅವರ ವಿರುದ್ಧ ದಾಖಲಾಗಿರುವ ಎಫ್ ಐಆರ್ ನ ವಿವರಗಳನ್ನು ಸಹ ಅದರಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಟಿವಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನೂಪುರ್ ಶರ್ಮಾ, ಪ್ರವಾದಿ ಮಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಪ್ರವಾದಿ ವಿರುದ್ಧ ನೀಡಿರುವ ಹೇಳಿಕೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇದಾದ ಬಳಿಕ ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ಇಬ್ಬರೂ ಕ್ಷಮೆ ಕೇಳಿದ್ದರು.