ವಿವಾಹ ನೋಂದಣಿಯನ್ನು ಸರಳೀಕರಣಗೊಳಿಸಿದ ಸಿಎಂ.

67
firstsuddi

ಬೆಂಗಳೂರು: ರಾಜ್ಯ ಸರ್ಕಾರವು ಇಂದು ಬಹುನಿರೀಕ್ಷಿತ ಬಜೆಟ್ ಮಂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ 14ನೇ ಹಾಗೂ ದಾಖಲೆಯ ಆಯವ್ಯಯ ಮಂಡಿಸಿದ್ದು, ಹಲವು ಯೋಜನೆಗಳ ಪ್ರಸ್ತಾಪ ಮಾಡಿದ್ದಾರೆ. ಇದೇ ವೇಳೆ ಮದುವೆ ನೋಂದಣಿಯನ್ನು ಸರಳೀಕರಣಗೊಳಿಸುವ ಕ್ರಮವನ್ನು ಸಿಎಂ ಪ್ರಕಟಿಸಿದ್ದಾರೆ.

ವಿವಾಹ ನೋಂದಣಿಗೆ ಇನ್ಮುಂದೆ ಮತ್ತಷ್ಟು ಸರಳೀಕರಣವಾಗಲಿದೆ. ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯಬೇಕಿತ್ತು. ಆದರೆ ಇದೀಗ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. 

ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಜೊತೆಗೆ ಗ್ರಾಮ ಪಂಚಾಯತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹೀಗಾಗಿ ಇನ್ಮುಂದೆ ರಿಜಿಸ್ಟರ್ ಮ್ಯಾರೇಜ್ ಆಗುವವರು ತಮ್ಮ ಗ್ರಾಮ ಪಂಚಾತಿಗಳಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಈ ಮೊದಲು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಯಬೇಕಿತ್ತು. ಇದೀಗ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿವಾಹ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಾಹ ನೋಂದಣಿ ಮಾಡಿಕೊಳ್ಳುವವರಿಗೆ ಅನುಕೂಲವಾಗಲಿದೆ. ಕಚೇರಿಯಿಂದ ಕಚೇರಿಗೆ ಅಲೆಯುವುದು, ಗಂಟೆಗಟ್ಟಲೇ ಕಾಯುವುದು ತಪ್ಪುತ್ತದೆ.