ವಿಶಾಖಪಟ್ಟಣಂನಲ್ಲಿ ಮತ್ತೆ ವಿಷಾನಿಲ ಸೋರಿಕೆ-ಇಬ್ಬರ ಸಾವು-ನಾಲ್ವರ ಸ್ಥಿತಿ ಗಂಭೀರ…

103
firstsuddi

ವಿಶಾಖಪಟ್ಟಣಂ : ಆಂದ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮತ್ತೆ ಅನಿಲ ದುರಂತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ವಿಶಾಖಪಟ್ಟಣಂ ನಲ್ಲಿರುವ ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಕಾಖಾನೆಯಲ್ಲಿ ನಿನ್ನೆ ರಾತ್ರಿ 11:30ರ ಸುಮಾರಿಗೆ ಬೆಂಜಿಮಿಡಾಜೋಲ್ ಎಂಬ ರಾಸಾಯನಿಕ ಅನಿಲ ಸೋರಿಕೆಯಾಗಿದ್ದು, ಈ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿ ಮೃತಪಟ್ಟಿದ್ದು, ನಾಲ್ವರು ಕಾರ್ಮಿಕರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.