ಲಂಡನ್ : ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ವಿಶ್ವಕಪ್ ಪಂದ್ಯದಿಂದ ಹೊರಬಿದ್ದಿದ್ದು, ಭಾನುವಾರ ಆಸ್ಟ್ರೇಲಿಯಾ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಶಿಖರ್ ಧವನ್ 117ರನ್ ಗಳಿಸಿ ತಂಡ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾನುವಾರ ನಡೆದ ಪಂದ್ಯದಲ್ಲಿ ಅವರ ಹೆಬ್ಬೆರಳಿಗೆ ಗಂಭೀರವಾಗಿ ಗಾಯವಾಗಿದ್ದು, ವೈಧ್ಯರು ಮೂರು ವಾರಗಳ ವಿಶ್ರಾಂತಿಯನ್ನು ಸೂಚಿಸಿದ್ದಾರೆ. ಹೀಗಾಗಿ ಶಿಖರ್ ಧವನ್ ವಿಶ್ವಕಪ್ ಪಂದ್ಯದಿಂದ ಹೊರಬಿದ್ದಿದ್ದಾರೆ.










