ವಿಶ್ವವಿಖ್ಯಾತ ಜಂಬೂಸವಾರಿಗೆ ಸಿಎಂ ಬಿಎಸ್‍ವೈ ಚಾಲನೆ…

134
firstsuddi

ಮೈಸೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದರು. ಯಡಿಯೂರಪ್ಪ ಅವರು ಇಂದು ಅರಮನೆಯ ಕೋಟೆ ಆಂಜನೇಯ ದೇವಾಲಯದ ಬಳಿ ಇರುವ ಜೋಡಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಚಿನ್ನದ ಅಂಬಾರಿಯಲ್ಲಿ ಅಲಂಕೃತಗೊಂಡಿದ್ದ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ಚಾಲನೆ ನೀಡಿದರು. ಕೊರೊನಾ ಭೀತಿ ಇರುವುದರಿಂದ ಪ್ರತಿ ವರ್ಷ 5.5 ಕಿ.ಮೀ ಮೆರವಣಿಗೆ ಮೂಲಕ ಸಾಗುತ್ತಿದ್ದ ಜಂಬೂಸವಾರಿ ಈ ಬಾರಿ ಕೇವಲ 400 ಮೀಗೆ ಸೀಮಿತಗೊಳಿಸಲಾಗಿತ್ತು.

ಜಂಬೂಸವಾರಿ ವೇಳೆ ಮೈಸೂರು ಜಿಲ್ಲಾ ಪಂಚಾಯಿತಿ ಸಿದ್ಧಪಡಿಸಿದ್ದ ಕೊರೋನಾ ಜಾಗೃತಿ ಮೂಡಿಸುವ ಒಂದು ಸ್ತಬ್ಧಚಿತ್ರ ಮಾತ್ರ ಭಾಗವಹಿಸಿತ್ತು. ಉಳಿದಂತೆ ಅಶ್ವಾರೋಹಿ ದಳದ ಎರಡು ತುಕಡಿ, ಕರ್ನಾಟಕ ಪೊಲೀಸ್ ಬ್ಯಾಂಡ್ ನ ಆನೆಗಾಡಿ ಹಾಗೂ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು.